Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:11 - ಕನ್ನಡ ಸತ್ಯವೇದವು J.V. (BSI)

11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸ ಮಾಡಲಿಲ್ಲವೆಂಬದನ್ನು ದೃಢಪಡಿಸುವದಕ್ಕೆ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಪಶುವಿನ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು; ಪ್ರಮಾಣ ಮಾಡಿದವನು ಈಡುಕೊಡಬೇಕಾದ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲೀಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲೀಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:11
10 ತಿಳಿವುಗಳ ಹೋಲಿಕೆ  

ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಮತ್ತೊಬ್ಬನು ಕಳಕೊಂಡದ್ದನ್ನು ತಾನು ಕಂಡು ಬೊಂಕಿ ಸುಳ್ಳಾಣೆಯಿಟ್ಟದ್ದರಿಂದಲೋ ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾದರೆ


ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


ಒಬ್ಬನು ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವದಕ್ಕೆ ಮತ್ತೊಬ್ಬನ ವಶಕ್ಕೆ ಕೊಟ್ಟ ಮೇಲೆ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ


ಆದರೆ ಆ ಪಶುವು ಅವನ ಬಳಿಯಿಂದ ಕಳವಾಗಿ ಹೋಗಿದ್ದರೆ ಅದರ ಒಡೆಯನಿಗೆ ಅವನು ಈಡುಕೊಡಬೇಕು.


ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು