Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:14 - ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪಕಾಲಕ್ಕೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಊನವಾದರೆ ಇಲ್ಲವೆ ಸತ್ತರೆ ಕೇಳಿಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:14
11 ತಿಳಿವುಗಳ ಹೋಲಿಕೆ  

ಹೇಗಂದರೆ ಯೆಹೋವನು ನೇವಿುಸಿದ ಬಿಡುಗಡೆಯ ಸಂವತ್ಸರವು ಬಂತೆಂದು ಪ್ರಕಟವಾದದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.


ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸ ಮಾಡಲಿಲ್ಲವೆಂಬದನ್ನು ದೃಢಪಡಿಸುವದಕ್ಕೆ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಪಶುವಿನ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು; ಪ್ರಮಾಣ ಮಾಡಿದವನು ಈಡುಕೊಡಬೇಕಾದ ಅಗತ್ಯವಿಲ್ಲ.


ನಿನ್ನನ್ನು ಬೇಡುವವನಿಗೆ ಕೊಡು; ನಿನ್ನಲ್ಲಿ ಕಡಾ ಈಸಿಕೊಳ್ಳಬೇಕೆಂದು ಬಂದವನಿಗೆ ಮುಖತಿರುವಿಕೊಳ್ಳಬೇಡ.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ಕಾಡುಮೃಗವು ಕೊಂದಿದ್ದರೆ ಅದರ ಹೆಣವನ್ನು ತೋರಿಸಲಿ; ಕಾಡುಮೃಗವು ಕೊಂದದಕ್ಕೆ ಬದಲುಕೊಡಬೇಕಾದ ಅವಶ್ಯವಿಲ್ಲ.


ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡ ಪಕ್ಷಕ್ಕೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣೆಕೆಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು