Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:19 - ಕನ್ನಡ ಸತ್ಯವೇದವು J.V. (BSI)

19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:19
14 ತಿಳಿವುಗಳ ಹೋಲಿಕೆ  

ಅವರು - ಪಶುಸಂಗಮಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.


ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ;


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಈ ದೇವತೆಗಳನ್ನು ಅವಲಂಬಿಸಿ ಸೇವಿಸೋಣ ಎಂದು ಬೋಧಿಸುತ್ತಾ ಆ ಬೋಧನೆಯನ್ನು ಸ್ಥಾಪಿಸುವದಕ್ಕೆ ಒಂದು ಅದ್ಭುತವನ್ನಾಗಲಿ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಲು ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ


ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.


ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು