Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:26 - ಕನ್ನಡ ಸತ್ಯವೇದವು J.V. (BSI)

26 ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಣುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಲ್ಲವೆ ಅವನ ಮೇಲೆ ಬಡ್ಡಿ ಹೊರಿಸಬೇಡ. ನಿಮ್ಮ ನೆರೆಯವನ ಮೇಲಂಗಿಯನ್ನು ಅಡವು ಇಟ್ಟುಕೊಂಡಿದ್ದರೆ, ಸೂರ್ಯನು ಮುಳುಗುವುದರೊಳಗಾಗಿ ಅವನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:26
16 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.


ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಆ ಸಾಲವನ್ನು ತೀರಿಸುವದಕ್ಕೆ ನಿನ್ನಿಂದಾಗದಿರಲು ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವನಲ್ಲವೆ, ಇದೇಕೆ?


ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ;


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಗಳನ್ನು ತೆಗೆದುಕೊಂಡಿದ್ದೀ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದೀ,


ಹೊದಿಯುವದಕ್ಕಿಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು