Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:27 - ಕನ್ನಡ ಸತ್ಯವೇದವು J.V. (BSI)

27 ಅವನಿಗೆ ಬೇರೆ ಯಾವ ಹೊದಿಕೆಯಿಲ್ಲವಲ್ಲಾ; ಅದನ್ನೇ ಮೈಗೆ ಕಟ್ಟಿಕೊಳ್ಳಬೇಕು; ಬೇರೆ ಯಾವದನ್ನು ಸುತ್ತಿಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕೇಳುವೆನು; ನಾನು ದಯಾಪರನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:27
14 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಯಾಕಂದರೆ ಅವನು ಮೊರೆಯಿಡುವ ಬಡವರನ್ನೂ ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು; ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು;


ಅರಸನಾದ ದಾವೀದನು ಬಹುರೀವಿುಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿಯು ನಿನ್ನ ಬಳಿಯಲ್ಲಿರುತ್ತಾನಲ್ಲಾ; ನಾನು ಮಹನಯಿವಿುಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಅವನು ನನ್ನನ್ನು ಎದುರುಗೊಳ್ಳುವದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ - ನಿನ್ನನ್ನು ಕೊಲ್ಲುವದಿಲ್ಲ ಎಂಬದಾಗಿ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದೆನು.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.


ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು