ವಿಮೋಚನಕಾಂಡ 22:3 - ಕನ್ನಡ ಸತ್ಯವೇದವು J.V. (BSI)3 ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು. ಅಧ್ಯಾಯವನ್ನು ನೋಡಿ |