ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.