6 ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
6 “ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.
6 “ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.
ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷೇತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೂ ಹೋಗಿ ಮೇಯುವಂತೆ ಮಾಡಿದರೆ ತನ್ನ ಹೊಲದ ಅಥವಾ ದ್ರಾಕ್ಷೇತೋಟದ ಉತ್ತಮಭಾಗದಲ್ಲಿ ಅವನಿಗೆ ಈಡುಕೊಡಬೇಕು.