Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:8 - ಕನ್ನಡ ಸತ್ಯವೇದವು J.V. (BSI)

8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:8
9 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ದಾವೀದನು ಇವರಲ್ಲಿ ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ ಮಂದಿಯನ್ನೂ ನ್ಯಾಯಾಧಿಪತಿಗಳನ್ನಾಗಿ ಮತ್ತು


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.


ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು