Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:14 - ಕನ್ನಡ ಸತ್ಯವೇದವು J.V. (BSI)

14 ನೀವು ವರುಷಕ್ಕೆ ಮೂರಾವರ್ತಿ ನನಗೆ ಜಾತ್ರೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೀವು ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:14
14 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


ಏಳನೆಯ ಸಬ್ಬತ್‍ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸ ಬೆಳೆಯ ನೈವೇದ್ಯದ್ರವ್ಯವನ್ನು ಸಮರ್ಪಿಸಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.


ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು.


ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.


ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.


ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಬಡಗಣ ಬಾಗಿಲಿಂದ ಆರಾಧಿಸುವದಕ್ಕೆ ಪ್ರವೇಶಿಸಿದವನು ತೆಂಕಣ ಬಾಗಿಲಿಂದ ಹೊರಡಲಿ; ತೆಂಕಣ ಬಾಗಿಲಿಂದ ಪ್ರವೇಶಿಸಿದವನು ಬಡಗಣ ಬಾಗಿಲಿಂದ ಹೊರಡಲಿ; ತಾನು ಪ್ರವೇಶಿಸಿದ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು