Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:16 - ಕನ್ನಡ ಸತ್ಯವೇದವು J.V. (BSI)

16 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:16
17 ತಿಳಿವುಗಳ ಹೋಲಿಕೆ  

[ಪಸ್ಕವಾದ ಏಳು] ವಾರಗಳ ಮೇಲೆ ನಡೆಯುವ ಜಾತ್ರೆ ಅಂದರೆ ಗೋದೀ ಬೆಳೆಯ ಪ್ರಥಮ ಸಮರ್ಪಣದ ಸುಗ್ಗಿಜಾತ್ರೆಯನ್ನೂ ಸಂವತ್ಸರದ ಅಂತ್ಯದಲ್ಲಿ ಫಲಸಂಗ್ರಹದ ಜಾತ್ರೆಯನ್ನೂ ಆಚರಿಸಬೇಕು.


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.


ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು