Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:26 - ಕನ್ನಡ ಸತ್ಯವೇದವು J.V. (BSI)

26 ನಿಮ್ಮ ದೇಶದಲ್ಲಿ ಗರ್ಭಸ್ರಾವವಾಗಲಿ ಬಂಜೇತನವಾಗಲಿ ಇರುವದೇ ಇಲ್ಲ; ನಿಮಗೆ ಸಂಪೂರ್ಣವಾದ ಆಯುಸ್ಸನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮ ನಾಡಿನಲ್ಲಿ ಗರ್ಭಸ್ರಾವವಾಗಲಿ ಬಂಜೆತನವಾಗಲಿ ಇರುವುದಿಲ್ಲ. ನಿಮಗೆ ಪೂರ್ಣವಾದ ಆಯುಸ್ಸನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:26
16 ತಿಳಿವುಗಳ ಹೋಲಿಕೆ  

ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವದಿಲ್ಲ.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವದು.


ಅವರ ಗೂಳಿಯು ಬೇಸರಗೊಳ್ಳದೆ ಹಾರುವದು; ಅವರ ಹಸುವು ಕಂದುಹಾಕದೆ ಈಯುವದು.


ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು.


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು; ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು.


ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಗತಿಸಿದನು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


(ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತಿಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು