Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:32 - ಕನ್ನಡ ಸತ್ಯವೇದವು J.V. (BSI)

32 ನೀವು ಅವರೊಡನೆಯಾಗಲಿ ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಅವರೊಡನೆಯಾಗಲಿ, ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಪ್ಪಂದವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:32
17 ತಿಳಿವುಗಳ ಹೋಲಿಕೆ  

ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ;


ಅವರೊಡನೆ ಕೂಡಿಕೊಂಡು ಅವರ ದುರಾಚಾರಗಳನ್ನು ಕಲಿತುಕೊಂಡರು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.


ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು