Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:10 - ಕನ್ನಡ ಸತ್ಯವೇದವು J.V. (BSI)

10 ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:10
28 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.


ಕೂತಿದ್ದವನು ಕಣ್ಣಿಗೆ ಸೂರ್ಯಕಾಂತ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲು ಪಚ್ಚೆಯಂತೆ ತೋರುತ್ತಿದ್ದ ಮುಗಿಲುಬಿಲ್ಲು ಇತ್ತು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ತರುವಾಯ ನಾನು ಕೈ ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವದಿಲ್ಲ ಎಂದು ಹೇಳಿದನು.


ಅದರೆ ಆತನು ಅವನಿಗೆ - ನೀನು ನನ್ನ ಮುಖವನ್ನು ನೋಡುವದಕ್ಕಾಗದು; ಮನುಷ್ಯರಲ್ಲಿ ಯಾವನೂ ನನ್ನನ್ನು ನೋಡಿ ಜೀವಿಸಲಾರನು ಎಂದು ಹೇಳಿದನು.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಯಾವನಾದರೂ ತಂದೆಯನ್ನು ನೋಡಿದ್ದಾನೆಂದು ತಿಳಿಯಬೇಡಿರಿ; ದೇವರ ಬಳಿಯಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆ.


ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.


ಇಸ್ರಾಯೇಲ್ ದೇವರೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು