Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:13 - ಕನ್ನಡ ಸತ್ಯವೇದವು J.V. (BSI)

13 ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:13
10 ತಿಳಿವುಗಳ ಹೋಲಿಕೆ  

ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.


ಯೌವನದಿಂದ ಮೋಶೆಗೆ ಶಿಷ್ಯನಾದ ನೂನನ ಮಗ ಯೆಹೋಶುವನು ಮೋಶೆಗೆ - ಸ್ವಾಮೀ, ಅವರಿಗೆ ಬೇಡವೆನ್ನಬೇಕು ಎಂದು ಹೇಳಿದನು.


ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಇಸ್ರಾಯೇಲ್ಯರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ - ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ ಎಂದು ಮೋಶೆಗೆ ಹೇಳಿದನು.


ಇದಲ್ಲದೆ ಯೆಹೋವನು ಆರೋನನಿಗೆ - ನೀನು ಮೋಶೆಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೊರಟುಹೋಗು ಎಂದು ಹೇಳಲಾಗಿ ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.


ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಅರಣ್ಯದಲ್ಲಿ ದೇವರ ಬೆಟ್ಟದ ಹತ್ತಿರ ಇಳುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;


ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು