Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:4 - ಕನ್ನಡ ಸತ್ಯವೇದವು J.V. (BSI)

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:4
27 ತಿಳಿವುಗಳ ಹೋಲಿಕೆ  

ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -


ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಅದನ್ನು ಹರಿದು ಹನ್ನೆರಡು ತುಂಡುಮಾಡಿ ಯಾರೊಬ್ಬಾಮನಿಗೆ -


ಯೆಹೋಶುವನು ಯೊರ್ದನಿನಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿ ಇಸ್ರಾಯೇಲ್ಯರಿಗೆ -


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.


ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಆಗ ಯಾಕೋಬನು ಕಲ್ಲನ್ನು ತೆಗೆದುಕೊಂಡು ಕಂಬವಾಗಿ ನಿಲ್ಲಿಸಿದನು.


ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು -


ಮತ್ತು ನೀನು ಅವರಿಗೆ ನೇವಿುಸಬೇಕಾದ ನ್ಯಾಯವಿಧಿಗಳು ಯಾವವಂದರೆ -


ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.


ಯೆಹೋವನು ಮೋಶೆಗೆ - ನೀನು ಈ ವಾಕ್ಯಗಳನ್ನು ಬರೆ. ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ನಿಬಂಧನೆಮಾಡಿದ್ದೇನೆ ಎಂದು ಹೇಳಿದನು.


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


ಸಹಿಮಾಡಿದವರು - ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು