Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:7 - ಕನ್ನಡ ಸತ್ಯವೇದವು J.V. (BSI)

7 ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:7
17 ತಿಳಿವುಗಳ ಹೋಲಿಕೆ  

ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.


ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಮತ್ತು ನಾನು ಬರೆದ ಪತ್ರಿಕೆಯನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.


ಅದಕ್ಕೆ ಜನರು - ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತಾ ಆತನ ಮಾತನ್ನು ಕೇಳುವೆವು ಅಂದರು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.


ಆದರೆ ಆತನ ಮುಂದೆ ಅವರ ಬಾಯಿ ವಂಚಿಸಿ ನಾಲಿಗೆ ಸುಳ್ಳಾಡಿತು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?


ತುತೂರಿಕೊಂಬುಗಳನ್ನೂದಿಸಿ ದೊಡ್ಡ ಆರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು