Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:21 - ಕನ್ನಡ ಸತ್ಯವೇದವು J.V. (BSI)

21 ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:21
13 ತಿಳಿವುಗಳ ಹೋಲಿಕೆ  

ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.


ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.


ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.


ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.


ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು