Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:30 - ಕನ್ನಡ ಸತ್ಯವೇದವು J.V. (BSI)

30 ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:30
20 ತಿಳಿವುಗಳ ಹೋಲಿಕೆ  

ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;


ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ


ಅವರ ಸಹೋದರರಾದ ವಿುಕ್ಕ ಕೆಹಾತ್ಯರಲ್ಲಿ ಕೆಲವರಿಗೆ ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ಕ್ರಮಪಡಿಸುವ ಕೆಲಸವಿತ್ತು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲವಾದದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು.


ಮೇಜು, ಅದರ ಕೋಲುಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಆಮೇಲೆ ಮೇಜನ್ನು ತರಿಸಿ ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿ ಇಡಬೇಕು;


ಅದರ ಮೇಲೆ ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.


ಯಾಜಕನು ದಾವೀದನಿಗೆ - ನನ್ನ ಬಳಿಯಲ್ಲಿ ಮೀಸಲ ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು ಎನ್ನಲು ದಾವೀದನು -


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.


ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು.


ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು