Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:37 - ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:37
28 ತಿಳಿವುಗಳ ಹೋಲಿಕೆ  

ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.


ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಯಾಕೆ ಈ ತೈಲವನ್ನು ಮುನ್ನೂರು ಹಣಕ್ಕೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ಮತ್ತು ಯೆಹೋವನು ಆಜ್ಞಾಪಿಸಿದಂತೆಯೇ ಅವನು ದೀಪಸ್ತಂಭವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣ ಕಡೆಯಲ್ಲಿ ಇಟ್ಟು


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು.


ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿಸಬೇಕು.


ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು


ನಿಯಮದ ಪ್ರಕಾರ ಮಹಾಪರಿಶುದ್ಧಸ್ಥಳದ ಮುಂದೆ ಉರಿಯುತ್ತಿರುವದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು