Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:40 - ಕನ್ನಡ ಸತ್ಯವೇದವು J.V. (BSI)

40 ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:40
15 ತಿಳಿವುಗಳ ಹೋಲಿಕೆ  

ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.


ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.


ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕೊಟ್ಟಾರಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು ಕೃಪಾಸನಮಂದಿರ ಇವುಗಳ ನಕ್ಷೆಯನ್ನು ಕೊಟ್ಟು


ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.


ಆ ವೇದಿಯನ್ನು ಹಲಿಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.


ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು.


ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು.


ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು