Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:9 - ಕನ್ನಡ ಸತ್ಯವೇದವು J.V. (BSI)

9 ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗುಡಾರದ ಮಾದರಿಯನ್ನೂ, ಅದರ ಎಲ್ಲಾ ಸಲಕರಣೆಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:9
13 ತಿಳಿವುಗಳ ಹೋಲಿಕೆ  

ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.


ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.


ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.


ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ


ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲ್ಯರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಅಡ್ಡದಂಡಕ್ಕೆ ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು