ವಿಮೋಚನಕಾಂಡ 26:1 - ಕನ್ನಡ ಸತ್ಯವೇದವು J.V. (BSI)1 [ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿ |