Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:24 - ಕನ್ನಡ ಸತ್ಯವೇದವು J.V. (BSI)

24 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವು ಬುಡದಿಂದ ತುದಿಯವರೆಗೂ, ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:24
7 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.


ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೇ ಕಲ್ಲುಗಳೂ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು