Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:19 - ಕನ್ನಡ ಸತ್ಯವೇದವು J.V. (BSI)

19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:19
14 ತಿಳಿವುಗಳ ಹೋಲಿಕೆ  

ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.


ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.


ಇವುಗಳ ಗದ್ದಿಗೇಕಲ್ಲುಗಳನ್ನೂ ಗೂಟಗಳನ್ನೂ ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಹೊರೆಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.


ಅಂಗಳದ ಸುತ್ತಲಿರುವ ಕಂಬಗಳೂ ಅವುಗಳ ಗದ್ದಿಗೇ ಕಲ್ಲುಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಇವುಗಳ ಸಕಲ ವಿಧವಾದ ಪರಿಚರ್ಯವನ್ನು ಇವರೇ ಮಾಡಬೇಕು.


ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಲಿನ ಪರದೆಯು, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ;


ಯಜ್ಞವೇದಿಯ ಎಲ್ಲಾ ಉಪಕರಣಗಳನ್ನೂ ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನೂ ಅಂಗಳದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನೂ ಮಾಡಿದನು.


ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.


ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,


ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಅಂಗಳವು ನೂರು ಮೊಳ ಉದ್ದವಾಗಿಯೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ಹುರಿನಾರಿನ ಬಟ್ಟೆಯಿಂದುಂಟಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇಕಲ್ಲುಗಳು ತಾಮ್ರದವುಗಳಾಗಿರಬೇಕು.


ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಅವರಿಗೆ ಅಪ್ಪಣೆಯನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು