Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:30 - ಕನ್ನಡ ಸತ್ಯವೇದವು J.V. (BSI)

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:30
22 ತಿಳಿವುಗಳ ಹೋಲಿಕೆ  

ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪು ಮಾಡಿದನು.


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಚೀಲದ ಪದಕವನ್ನು ಅವನಿಗೆ ಬಿಗಿಸಿ ಅದರೊಳಗೆ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿ


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು


(ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?


ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ. ಕೂಡಾ ಸಾಯುವದಕ್ಕೂ ಕೂಡಾ ಬದುಕುವದಕ್ಕೂ ನೀವು ನಮ್ಮ ಹೃದಯದಲ್ಲಿದ್ದೀರೆಂದು ಮೊದಲೇ ಹೇಳಿದ್ದೇನಲ್ಲಾ.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.


ದೈವನಿರ್ಣಯದ ಪದಕದ ಮೇಲೆ ಇಸ್ರಾಯೇಲ್ಯರ ಕುಲಗಳ ಹೆಸರುಗಳು ಬರೆದಿರುವದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ನಿತ್ಯವಾಗಿ ಯೆಹೋವನ ನೆನಪಿಗೆ ತರುವದಕ್ಕಾಗಿ ತನ್ನ ಹೃದಯದ ಮೇಲೆ ವಹಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು