Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:31 - ಕನ್ನಡ ಸತ್ಯವೇದವು J.V. (BSI)

31 ಮಹಾಯಾಜಕನು ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಪ್ರಧಾನ ಯಾಜಕನು ಎಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿ ಬಣ್ಣದ ಬಟ್ಟೆಯಿಂದ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಏಫೋದಿನ ಒಳಗೆ ಹಾಕಿಕೊಳ್ಳಲು ಒಂದು ನಿಲುವಂಗಿಯನ್ನು ನೀಲಿಬಟ್ಟೆಯಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:31
7 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ ನಡುಕಟ್ಟನ್ನು ಸುತ್ತಿ ಮೇಲಂಗಿಯನ್ನು ತೊಡಿಸಿ ಕವಚವನ್ನು ಹಾಕಿಸಿ ಕವಚದ ಮೇಲಣ ವಿಚಿತ್ರವಾದ ನಡುಕಟ್ಟನ್ನು ಕಟ್ಟಿ ಅದರಿಂದ ಕವಚವನ್ನು ಅವನಿಗೆ ಬಂಧಿಸಿ


ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.


ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು.


ಆ ವಸ್ತ್ರಗಳನ್ನು ಅಂದರೆ ನಿಲುವಂಗಿಯನ್ನೂ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ಮೇಲಂಗಿಯನ್ನೂ ಕವಚವನ್ನೂ ಚೀಲದ ಪದಕವನ್ನೂ ಆರೋನನಿಗೆ ತೊಡಿಸಿ ಕವಚದ ವಿಚಿತ್ರವಾದ ನಡುಕಟ್ಟನ್ನು ಕಟ್ಟಿಸಿ


ಅವನ ತಾಯಿಯು ಪ್ರತಿವರುಷವೂ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವದಕ್ಕೆ ಬಂದಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದು ಕೊಡುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು