Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:34 - ಕನ್ನಡ ಸತ್ಯವೇದವು J.V. (BSI)

34 ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಚಿನ್ನದ ಗೆಜ್ಜೆಯು ಹಾಗು ದಾಳಿಂಬೆಯಂತಿರುವ ಚಂಡು ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:34
15 ತಿಳಿವುಗಳ ಹೋಲಿಕೆ  

ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ನೀನು ನನಗೆ ಉಪದೇಶಮಾಡಬಹುದಾಗಿತ್ತು; ದ್ರಾಕ್ಷೆಯ ವಿುಶ್ರಪಾನಕವನ್ನು, ನನ್ನ ದಾಳಿಂಬರದ ಸವಿರಸವನ್ನು, ನಿನಗೆ ಕುಡಿಸುತ್ತಿದ್ದೆನು.


ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ


ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.


ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ, ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನೂ ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನೂ ತಗಲಿಸಬೇಕು.


ಆರೋನನು ಸೇವೆಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದ ಹಾಗೆ ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.


ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇತ ಕೆಲಸದಿಂದ ಮಾಡಿದನು.


ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು