ವಿಮೋಚನಕಾಂಡ 28:35 - ಕನ್ನಡ ಸತ್ಯವೇದವು J.V. (BSI)35 ಆರೋನನು ಸೇವೆಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದ ಹಾಗೆ ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆರೋನನು ಯಾಜಕನಾಗಿ ಸೇವೆಮಾಡುವಾಗ ಈ ನಿಲುವಂಗಿಯನ್ನು ಧರಿಸಿಕೊಂಡಿರುವನು. ಯೆಹೋವನ ಮುಂದೆ ನಿಲ್ಲುವುದಕ್ಕೆ ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಅವನು ಪವಿತ್ರಸ್ಥಳವನ್ನು ಬಿಡುವಾಗಲೂ ಗೆಜ್ಜೆಗಳು ಶಬ್ಧ ಮಾಡುತ್ತಿರುತ್ತವೆ. ಹೀಗಾಗಿ ಆರೋನನು ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಅವನು ಯೆಹೋವ ದೇವರ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ, ಅವನು ಸಾಯದಂತೆ ಅವನ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿ |