ವಿಮೋಚನಕಾಂಡ 28:4 - ಕನ್ನಡ ಸತ್ಯವೇದವು J.V. (BSI)4 ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು. ಅಧ್ಯಾಯವನ್ನು ನೋಡಿ |