Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:40 - ಕನ್ನಡ ಸತ್ಯವೇದವು J.V. (BSI)

40 ಆರೋನನ ಮಕ್ಕಳಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವರಿಗೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಮುಂಡಾಸಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗೂ ಶೋಭೆ ಸಿಗುವಂತೆ ನಿಲುವಂಗಿಗಳನ್ನೂ, ನಡುಕಟ್ಟುಗಳನ್ನೂ ಹಾಗೂ ಪೇಟಗಳನ್ನೂ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:40
16 ತಿಳಿವುಗಳ ಹೋಲಿಕೆ  

ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.


ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.


ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;


ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ


ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು