Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:13 - ಕನ್ನಡ ಸತ್ಯವೇದವು J.V. (BSI)

13 ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:13
29 ತಿಳಿವುಗಳ ಹೋಲಿಕೆ  

ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.


ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.


ಅವನು ದೋಷಪರಿಹಾರಕಯಜ್ಞ ಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಅವರು ಹೋರಿಯ ಕೊಬ್ಬನ್ನೂ ಟಗರಿನ ಬಾಲದ ಕೊಬ್ಬನ್ನೂ ವಪೆಯನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ


ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.


ಅವನು ಆ ಟಗರಿನ ಕೊಬ್ಬನ್ನೂ ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಎರಡು ಹುರುಳಿಕಾಯಿಗಳು, ಅವುಗಳ ಮೇಲಿದ್ದ ಕೊಬ್ಬು ಇವುಗಳನ್ನೂ ಬಲದೊಡೆಯನ್ನೂ


ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿದನು.


ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಅವನ ವಂಶದವರಿಗೂ ಆಗಬೇಕು.


ಅವನು ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಎರಡು ಹುರುಳಿಕಾಯಿಗಳನ್ನೂ


ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಬೆಂಕಿ ಉರಿಸಿ ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು