Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:2 - ಕನ್ನಡ ಸತ್ಯವೇದವು J.V. (BSI)

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:2
14 ತಿಳಿವುಗಳ ಹೋಲಿಕೆ  

ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.


ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಒಂದು ಹುಳಿಯಿಲ್ಲದ ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡನಂತರ ಅವನ ಕೈಯಲ್ಲಿ ಇಟ್ಟು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟು


ಆದರೆ ಎಣ್ಣೆ ಹೊಯಿದ ಹಿಟ್ಟನ್ನಾಗಲಿ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮವಾಗಿ ಅನುಭವಿಸಬೇಕು.


ಅದು ನೈವೇದ್ಯ ವಸ್ತುವಾದದರಿಂದ ಅದರ ಮೇಲೆ ಎಣ್ಣೆ ಹೊಯಿದು ಧೂಪವಿಡಬೇಕು.


ಬಲದೊಡೆಯನ್ನೂ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.


ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು.


ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು