ವಿಮೋಚನಕಾಂಡ 29:20 - ಕನ್ನಡ ಸತ್ಯವೇದವು J.V. (BSI)20 ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ಮಿಕ್ಕ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೂ ಸುರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |