Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:24 - ಕನ್ನಡ ಸತ್ಯವೇದವು J.V. (BSI)

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:24
9 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ಎಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವದಕ್ಕೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನೂ ಯಾವದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ ನಿನ್ನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಅದನ್ನು ತಿನ್ನಬಹುದು. ಯಾಕಂದರೆ ಇಸ್ರಾಯೇಲ್ಯರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನೂ ಬಲದೊಡೆಗಳನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಬಲದೊಡೆಯನ್ನೂ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ಅದು ಮೊದಲುಗೊಂಡು ಅವರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.


ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು