Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:28 - ಕನ್ನಡ ಸತ್ಯವೇದವು J.V. (BSI)

28 ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:28
18 ತಿಳಿವುಗಳ ಹೋಲಿಕೆ  

ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.


ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.


ನಿಮಗೆ ಕೊಡಲ್ಪಡುವ ಸಕಲಪದಾರ್ಥಗಳಲ್ಲಿಯೂ ನೀವು ಉತ್ತಮಭಾಗವನ್ನೇ ಅಂದರೆ ದೇವರ ವಸ್ತುವಾಗುವದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು.


ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.


ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.


ಆರೋನನ ಯಾಜಕದೀಕ್ಷಾವಸ್ತ್ರಗಳೇ ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರೂ ಪಟ್ಟಾಭಿಷಿಕ್ತರಾಗಿ ಮಹಾಯಾಜಕೋದ್ಯೋಗಕ್ಕೆ ಬಂದಾಗ ಅವುಗಳನ್ನು ಧರಿಸಿಕೊಳ್ಳಬೇಕು.


ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು.


ಒಬ್ಬನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.


ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.


ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಮೋಶೆ ಆರೋನನ ವಸ್ತ್ರಗಳನ್ನು ತೆಗೆದುಬಿಟ್ಟು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು