Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:29 - ಕನ್ನಡ ಸತ್ಯವೇದವು J.V. (BSI)

29 ಆರೋನನ ಯಾಜಕದೀಕ್ಷಾವಸ್ತ್ರಗಳೇ ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರೂ ಪಟ್ಟಾಭಿಷಿಕ್ತರಾಗಿ ಮಹಾಯಾಜಕೋದ್ಯೋಗಕ್ಕೆ ಬಂದಾಗ ಅವುಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕ ಉದ್ಯೋಗಕ್ಕೆ ಆರಿಸಲ್ಪಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:29
14 ತಿಳಿವುಗಳ ಹೋಲಿಕೆ  

ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಅವರು ನನಗೋಸ್ಕರ ಯಾಜಕರಾಗುವದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವದು ಎಂದು ಹೇಳಿದನು.


ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.


ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು.


ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.


ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಯೆಹೋವನು ಮೋಶೆಗೆ - ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಂದು


[ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು