Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:33 - ಕನ್ನಡ ಸತ್ಯವೇದವು J.V. (BSI)

33 ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:33
16 ತಿಳಿವುಗಳ ಹೋಲಿಕೆ  

ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು.


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಲೊಳಗೆ ಊಟಮಾಡಬೇಕು.


ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.


ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು