Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:36 - ಕನ್ನಡ ಸತ್ಯವೇದವು J.V. (BSI)

36 ಪ್ರತಿದಿನದಲ್ಲಿಯೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಿಮಾಡುವದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:36
14 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.


ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸಲಿ.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು