Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:4 - ಕನ್ನಡ ಸತ್ಯವೇದವು J.V. (BSI)

4 ಆಗ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿಗೆ ಕರಕೊಂಡು ಬಂದು ನೀರಿನಲ್ಲಿ ಸ್ನಾನ ಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:4
18 ತಿಳಿವುಗಳ ಹೋಲಿಕೆ  

ಅದಲ್ಲದೆ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸಿ


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವನು ಸಂಜೇವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಣುಗಿದ ಮೇಲೆ ಪಾಳೆಯದೊಳಗೆ ಬರಬಹುದು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಮತ್ತು ಮೋಶೆ ಗುಡಾರದ ಬಾಗಲಿಗೆ ಪರದೆಯನ್ನು ಹಾಕಿದನು.


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು.


ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು.


ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದೆ ಕರಕೊಂಡು ಬಂದು ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ; ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯಜನರ ಪ್ರಾಕಾರಕ್ಕೆ ಬರುವರು.


ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು