ವಿಮೋಚನಕಾಂಡ 29:40 - ಕನ್ನಡ ಸತ್ಯವೇದವು J.V. (BSI)40 ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.