Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:42 - ಕನ್ನಡ ಸತ್ಯವೇದವು J.V. (BSI)

42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:42
10 ತಿಳಿವುಗಳ ಹೋಲಿಕೆ  

ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.


ಅಲ್ಲಿಯೇ ನಾನು ಇಸ್ರಾಯೇಲ್ಯರಿಗೆ ದರ್ಶನವನ್ನು ಕೊಡುವೆನು; ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವದು.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ, ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿಪರಿಶುದ್ಧವಾದದ್ದೆಂದು ನೀವು ತಿಳುಕೊಳ್ಳಬೇಕು.


ಮೋಶೆ ಡೇರೆಯನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿಸುತ್ತಿದ್ದನು. ಅದಕ್ಕೆ ದೇವದರ್ಶನದ ಡೇರೆ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರು ಪಾಳೆಯದ ಹೊರಗಿದ್ದ ದೇವದರ್ಶನದ ಡೇರೆಗೆ ಹೋಗುತ್ತಿದ್ದರು.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ಯಾಜಕರು ಕುರಿಯನ್ನೂ ಧಾನ್ಯ ನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯಸರ್ವಾಂಗಹೋಮವಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.


ಆಗ ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದವು ನನ್ನ ಕಿವಿಗೆ ಬಿತ್ತು; ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು