ವಿಮೋಚನಕಾಂಡ 29:44 - ಕನ್ನಡ ಸತ್ಯವೇದವು J.V. (BSI)44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು; ಆರೋನನನ್ನೂ ಅವನ ಮಕ್ಕಳನ್ನೂ ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು. ಅಧ್ಯಾಯವನ್ನು ನೋಡಿ |