Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:7 - ಕನ್ನಡ ಸತ್ಯವೇದವು J.V. (BSI)

7 ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನಮಾಡಿ ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:7
15 ತಿಳಿವುಗಳ ಹೋಲಿಕೆ  

ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ


ನನ್ನ ಸೇವಕನಾದ ದಾವೀದನನ್ನು ಕಂಡು ಪರಿಶುದ್ಧತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.


ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸಬೇಕು; ಆಗ ಅವರು ನನಗೆ ಯಾಜಕರಾಗಿರುವರು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.


ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು.


ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು