ವಿಮೋಚನಕಾಂಡ 3:11 - ಕನ್ನಡ ಸತ್ಯವೇದವು J.V. (BSI)11 ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು. ಅಧ್ಯಾಯವನ್ನು ನೋಡಿ |