Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:13 - ಕನ್ನಡ ಸತ್ಯವೇದವು J.V. (BSI)

13 ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:13
16 ತಿಳಿವುಗಳ ಹೋಲಿಕೆ  

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಆದದರಿಂದ ಅವನು ಆ ದೂತನನ್ನು - ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು ಎಂದು ಕೇಳಿದನು.


ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಯೆಹೋವನು ಯುದ್ಧಶೂರನು; ಆತನ ನಾಮಧೇಯವು ಯೆಹೋವನೇ.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದು [ತಮ್ಮ ಸಂಗಡ] ಮಾತಾಡುವವನು ನಾನೇ, ಹೌದು ನಾನೇ, ಎಂದು [ರಕ್ಷಣೆಯ] ಆ ದಿನದಲ್ಲಿ ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಇದೇ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು