ವಿಮೋಚನಕಾಂಡ 3:18 - ಕನ್ನಡ ಸತ್ಯವೇದವು J.V. (BSI)18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |