Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:5 - ಕನ್ನಡ ಸತ್ಯವೇದವು J.V. (BSI)

5 ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:5
12 ತಿಳಿವುಗಳ ಹೋಲಿಕೆ  

ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು.


ಮತ್ತು ಕರ್ತನು ಅವನಿಗೆ - ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು.


ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.


ಯಾಕಂದರೆ - ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು.


ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಾವು ಪರಿಶುದ್ಧಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ವಾಣಿಯನ್ನು ನಾವೇ ಕೇಳಿದೆವು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಆಗ ಮೋಶೆ, ತನ್ನನ್ನು ಯೆಹೋವನು ಯಾವ ಮಾತುಗಳನ್ನು ಹೇಳುವದಕ್ಕೆ ಕಳುಹಿಸಿದನೋ ಯಾವ ಮಹತ್ಕಾರ್ಯಗಳನ್ನು ಮಾಡುವದಕ್ಕೆ ಆಜ್ಞಾಪಿಸಿದನೋ ಅವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು