ವಿಮೋಚನಕಾಂಡ 3:7 - ಕನ್ನಡ ಸತ್ಯವೇದವು J.V. (BSI)7 ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಅಧ್ಯಾಯವನ್ನು ನೋಡಿ |