Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:8 - ಕನ್ನಡ ಸತ್ಯವೇದವು J.V. (BSI)

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:8
54 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.


ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಲುಗಿದರೆ ಎಷ್ಟೋ ಒಳ್ಳೇದು!


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ನಾನು ಇಳಿದು ಹೋಗಿ ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುತ್ತೇನೆ ಅಂದನು.


ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ಅವರ ದೇಶವು ಒಳ್ಳೇದೋ ಕೆಟ್ಟದ್ದೋ, ಅವರ ವಾಸಸ್ಥಳಗಳು ಪಾಳೆಯಗಳೋ ಕೋಟೆಗಳೋ,


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ತಿರಿಗಿ ಕರೆದುಕೊಂಡು ಬರುವೆನು; [ನಿನ್ನ ಅವಸಾನಕಾಲದಲ್ಲಿ] ಯೋಸೇಫನು ನಿನ್ನ ಕಣ್ಣುಗಳ ಮೇಲೆ ಕೈಯಿಡುವನು ಅಂದನು.


ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಬಹಳ ಮಂದಿಯೋ ಸ್ವಲ್ಪ ಮಂದಿಯೋ,


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ಹಿವ್ವಿಯರೂ ಅರ್ಕಿಯರೂ ಸೀನಿಯರೂ ಅರ್ವಾದಿಯರೂ


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು